ಬೆಂಗಳೂರು:
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಏ.14ರಂದು ಸೋಮವಾರ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸೋಮವಾರ ಹಗುರ ಮಳೆ/ ಗುಡುಗು ಸಹಿತ ಮಳೆ (Rain News) ಬೀಳುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 21°C ಇರುವ ಸಾಧ್ಯತೆ ಇದೆ.
ಏ.15ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಏ.16ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ .17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ.18ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಏ .19ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
