ಕರ್ನಾಟಕದಲ್ಲಿ ಮಳೆ, ಈ ಭಾಗದಲ್ಲಿ ಶಾಖ ಅಲೆಯ ಎಚ್ಚರಿಕೆ!

ಬೆಂಗಳೂರು: 

    ರಾಜ್ಯದಲ್ಲಿ ಏಕಕಾಲಕ್ಕೆ ಮಳೆ ಹಾಗೂ ಶಾಖದ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ಕೊಟ್ಟಿದೆ. ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ವಿವಿಧ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನೂ ನೀಡಲಾಗಿದೆ.

   ಈಶಾನ್ಯ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಈಗ ಸಮಭಾಜಕ ಹಿಂದೂ ಮಹಾಸಾಗರ ಮತ್ತು ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಸರಾಸರಿ ಸಮುದ್ರಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ ಇಂದಿನಿಂದಿ ವಿವಿಧ ಭಾಗದಲ್ಲಿ ಮಿಂಚು – ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಲಾಗಿದೆ.

    ಎಲ್ಲೆಲ್ಲಿ ಮಳೆಯಾಗಲಿದೆ ? ಇಂದು (ಮಾರ್ಚ್ 11) ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಿಂಚು – ಗುಡುಗು ಸಹಿತ ಮಳೆಯಾಗಲಿದೆ. ಮಾರ್ಚ್ 12ಕ್ಕೆ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಶಾಖದ ಅಲೆಯ ಎಚ್ಚರಿಕೆ: ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ರಾಜ್ಯದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಭಾರೀ ಬಿಸಿಲು ಇರಲಿದ್ದು ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಿ ಶಾಖದ ಅಲೆಯ ಎಚ್ಚರಿಕೆಯನ್ನು ಕೊಡಲಾಗಿದೆ. ಉಷ್ಣಅಲೆಯ ಎಚ್ಚರಿಕೆಯನ್ನು ಕರಾವಳಿ ಭಾಗದಲ್ಲಿ ನೀಡಲಾಗಿದೆ. ಮುಂದಿನ 2 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಬಿಸಿಯ ವಾತಾವರಣ ಇರಲಿದೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

   ತಾಪಮಾನದ ಮುನ್ಸೂಚನೆ: ಮುಂದಿನ 5 ದಿನಗಳ ವರೆಗೆ ಉತ್ತರ ಕರ್ನಾಟಕದ ಭಾಗದಲ್ಲಿ ತಾಪಮಾನದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಲಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.

Recent Articles

spot_img

Related Stories

Share via
Copy link