ಮಂಡ್ಯ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ 3 ದಿನಗಳವರೆಗೆ ವಾಯುವ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. IMD ಪ್ರಕಾರ, ಫೆಬ್ರವರಿ 22 ರಿಂದ ಫೆಬ್ರವರಿ 25 ರವರೆಗೆ 15 ಪ್ರದೇಶಗಳಲ್ಲಿ ಮಳೆ ಮುಂದುವರೆಯುತ್ತದೆ.
5 ರಾಜ್ಯಗಳ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿದೆ. ಪ್ರಸ್ತುತ, ಮಳೆ ಮತ್ತು ಹಿಮಪಾತದ ಅವಧಿಯು ಮುಂದುವರೆಯಲಿದೆ. ಇನ್ನು ನವದೆಹಲಿಯಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ಮೋಡ ಕವಿದ ವಾತಾವರಣ ನಿರ್ಮಾಣ ಆಗಲಿದೆ ಎಂದು ತಿಳಿಸಿದ್ದು, ಈ ವೇಳೆಯೇ ಸಾಧಾರಣ ಮಳೆಯಾಗುವ ಸಾಧ್ಯೆತೆಯಿದೆ ಅಂತಲೂ ತಿಳಿಸಿದೆ.
ಬಿಹಾರದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಇದು ಫೆಬ್ರವರಿ 25ರ ವರೆಗೆ ಮುಂದುವರೆಯುತ್ತದೆ ಮತ್ತು ಜಾರ್ಖಂಡ್‌ನ ಹಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ. ಪಶ್ಚಿಮ ಬಂಗಾಳದಲ್ಲೂ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಇನ್ನು ದಕ್ಷಿಣದ ರಾಜ್ಯಗಳಲ್ಲಿ ಹವಾಮಾನವು ಸಾಮಾನ್ಯವಾಗಿರಲಿದೆ. ಆದರೆ ಕೇರಳದ ಕೆಲವೆಡೆ ಮಾತ್ರ ಸಾಧಾರಣ ಮಳೆ ಸುರಿಯುವ ನಿರೀಕ್ಷೆಯಿದೆ. ಇನ್ನು ಕರ್ನಾಟಕ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ತಾಪಮಾನ ತುಸು ಕಡಿಮೆಯಿರಲಿದ ಎಂದು ತಿಳಿಸಿದೆ. ಸ್ಕೈಮೆಟ್ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಅರುಣಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಹಿಮಪಾತದೊಂದಿಗೆ ಸಾಧಾರಣ ಮಳೆಯಾಗಲಿದೆ. ಆದರೆ ಅರುಣಾಚಲ ಪ್ರದೇಶದಲ್ಲಿ ಫೆಬ್ರವರಿ 23ರವರೆಗೆ ಇದು ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಉತ್ತರ ಪಂಜಾಬ್, ಉತ್ತರ ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ಬಿಹಾರದ ಭಾಗಗಳು, ಗಂಗಾ ಪಶ್ಚಿಮ ಬಂಗಾಳ, ಪೂರ್ವ ಉತ್ತರ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ, ಜಾರ್ಖಂಡ್‌ನ ಕೆಲವು ಭಾಗಗಳು, ಈಶಾನ್ಯ ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದಲ್ಲೂ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ