ಬೆಂಗಳೂರು
ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ ಎರಡು ವಾರಗಳಿಂದ ನಾನಾ ಕಡೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಬುಧವಾರ ಸಂಜೆ ಬೆಂಗಳೂರಿನ ಕೆಲವೇ ಕೆಲವೆಡೆ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯುವ ಮುನ್ಸೂಚನೆ ಸಿಕ್ಕಿದೆ.
ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಮುಂದುವರೆಲಿದೆ.
ಮೈಸೂರು, ಹಿರೇಕೆರೂರು, ಎನ್ಆರ್ ಪುರ, ಕೃಷ್ಣರಾಜಪೇಟೆ, ಕಳಸ, ಸರಗೂರು, ಎಚ್ಡಿ ಕೋಟೆ, ಪೊನ್ನಂಪೇಟೆ, ಶೃಂಗೇರಿ, ಕೃಷ್ಣರಾಜಸಾಗರ, ಭಾಗಮಂಡಲ, ನಾಪೋಕ್ಲು, ಹಾರಂಗಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
