RAIN UPDATE : ಎರಡು ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರು:

          ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿದೆ. ಆದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಆಗಸ್ಟ್ 27 ರಂದು ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

      ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ 5 ಸೆಂ.ಮೀ, ತುಮಕೂರಿನ ಗುಬ್ಬಿ ಮತ್ತು ಚಿಕ್ಕನಹಳ್ಳಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೇವೂರು ಮತ್ತು ಯಲಬುರ್ಗಾ, ಕವಡಿಮಟ್ಟಿ (ಯಾದಗಿರಿ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ), ಶೃಂಗೇರಿ (ಚಿಕ್ಕಮಗಳೂರು), ಬೆಳ್ಳೂರು (ಮಂಡ್ಯ) ಮತ್ತು ದಾವಣಗೆರೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

    ಕುಕನೂರು, ಮುನಿರಾಬಾದ್ (ಕೊಪ್ಪಳ), ರಾಯಚೂರು ಮತ್ತು ದೇವದುರ್ಗ (ರಾಯಚೂರು), ಶೋರಾಪುರ (ಯಾದಗಿರಿ), ಚನ್ನಗಿರಿ (ದಾವಣಗೆರೆ), ಶಿವಮೊಗ್ಗ, ಕಡೂರು ಮತ್ತು ಕೊಟ್ಟೂರಿನಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap