ಮುಂಬೈ:
ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಅವರು ಮಂಗಳವಾರ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಆಡಳಿತರೂಢ ‘ಮಹಾಯುತಿ’ ಮೈತ್ರಿಗೆ ಬೇಷರತ್ ಬೆಂಬಲ ನೀಡಿದ್ದಾರೆ.
ಮುಂಬೈನಲ್ಲಿ ತಮ್ಮ ಪಕ್ಷದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ ರಾಜ್ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆಂಬಲವನ್ನು ಘೋಷಿಸಿದರು ಮತ್ತು ಮುಂಬರುವ ಲೋಕಸಭೆ ಚುನಾವಣೆಯು ‘ದೇಶದ ಭವಿಷ್ಯ’ವನ್ನು ನಿರ್ಧರಿಸುತ್ತದೆ ಎಂದರು.
ಇದೇ ವೇಳೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸುವಂತೆ ರಾಜ್ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಕರೆ ನೀಡಿದರು.
MNS ಮುಖ್ಯಸ್ಥ ರಾಜ್ ಠಾಕ್ರೆ ಅವರು ಇತ್ತೀಚಿಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಿದ್ದರು. ಇದೀಗ ಬೇಷರತ್ ಬೆಂಬಲ ಘೋಷಿಸಿದ್ದಾರೆ.