ರಾಜ್ಯಪಾಲರ ನಡೆಗೆ ಕಾಂಗ್ರೆಸ್ ನಾಯಕರ ಆಕ್ರೋಶ, ರಾಜಭವನ ಚಲೋ

ಬೆಂಗಳೂರು:

   ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಶನಿವಾರ ಪ್ರತಿಭಟನೆ ನಡೆಸಿತು.

   ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು.

  ನಂತರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಿಂದ ರಾಜಭವನದವರೆಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಡಳಿತ ಪಕ್ಷದ ನಾಯಕರು ‘ರಾಜಭವನ ಚಲೋ’ ಮೆರವಣಿಗೆ ನಡೆಸುತ್ತಿದ್ದಾರೆ. ಈ ವೇಳೆ ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಗೆಹ್ಲೋಟ್ ತಮ್ಮ ವಿರುದ್ಧ ತಾರತಮ್ಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. 

   1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 218ರ ಅಡಿಯಲ್ಲಿ ಸಿಎಂ ವಿರುದ್ಧ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ದೂರುಗಳಲ್ಲಿ ಉಲ್ಲೇಖಿಸಿರುವ ಅಪರಾಧ ಕುರಿತ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 16ರಂದು ಅನುಮತಿ ನೀಡಿದ್ದರು.

Recent Articles

spot_img

Related Stories

Share via
Copy link