ಬೆಂಗಳೂರು:
ಕಾಂಗ್ರೆಸ್ ಗೆ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಪುತ್ರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಜನಂದಿನಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈಗಾಗಲೇ ರಾಜನಂದಿನಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸಿದ್ದು, ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು (ಏ.12) ಬಿಎಸ್ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಬೇಟಿಯಾದ ರಾಜನಂದನಿ ಮಾತುಕತೆ ನಡೆಸಿದ್ದರು. ಅಲ್ಲದೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಭೇಟಿ ಕುರಿತ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದ್ದವು. ಇದೀಗ ಕೆಲವೇ ಗಂಟೆಗಳ ಅಂತರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ರಾಜನಂದಿನಿಗೆ ಕಾಂಗ್ರೆಸ್ ಟಿಕೆಟ್ ವಂಚಿಸಿತ್ತು. ಇಷ್ಟೇ ಅಲ್ಲ ಕಾಗೋಡು ತಿಮ್ಮಪ್ಪ ಅವರಿಗೂ ಟಿಕೆಟ್ ನಿರಾಕರಿಸಲಾಗಿತ್ತು. ಸಾಗರದಿಂದ ಕಾಗೋಡು ತಿಮ್ಮಪ್ಪ ಮತ್ತೆ ಸ್ಪರ್ಧಿಸಲು ಸಜ್ಜಾಗಿದ್ದರು. ವಯಸ್ಸಿನ ಕಾರಣದಿಂದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರೆ ಪುತ್ರಿಗೆ ಟಿಕೆಟ್ ಕೊಡಿಸಲು ಮುಂದಾಗಿದ್ದರು. ಆದರೆ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ, ಪುತ್ರಿ ರಾಜನಂದಿನಿ ಬದಲು ಬೇಳೂರು ಗೋಪಾಲಕೃಷ್ಣಗೆ ಟಿಕೆಟ್ ನೀಡಿದ್ದರು.
ಇದರಿಂದ ಕಾಗೋಡು ಹಾಗೂ ರಾಜನಂದಿನಿ ತೀವ್ರ ಅಸಮಾಧಾನಗೊಂಡಿದ್ದರು. ಇದೀಗ ಕಾಂಗ್ರೆಸ್ ತಮ್ಮನ್ನು ಕಡೆಗಣಿಸುತ್ತಿದೆ ಅನ್ನೋ ಅಸಮಾಧಾನವನ್ನು ರಾಜನಂದಿನಿ ಹೊರಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ