IPL 2022 : ಯಾರೇ ಗೆದ್ರು, ಯಾರೇ ಸೋತ್ರು ಲೆಕ್ಕಕ್ಕಿಲ್ಲ: ರಾಜಸ್ಥಾನ್ ರಾಯಲ್ಸ್ ತಂಡವೇ ಟಾಪ್

IPL 2022:

 ಐಪಿಎಲ್ 2022ರ ಪಾಯಿಂಟ್ ಟೇಬಲ್  ಹೇಗಿದೆ?, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಚ್ಚರಿಯ ಫಲಿತಾಂಶ ಬೆಳಕಿಗೆ ಬರುತ್ತಿದೆ.ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಈ ಬಾರಿ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದೆ.

ಕಳೆದ ಬಾರಿಯ ವಿನ್ನರ್ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಸೋಲಿನ ಬಳಿಕ ಗೆಲುವಿನ ಲಯಕ್ಕೆ ಮರಳಿದ್ದರೆ ಇತ್ತ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಆಡಿದ ಐದು ಪಂದ್ಯಗಳಲ್ಲಿಯೂ ಸೋಲುಂಡು ಕೆಟ್ಟ ದಾಖಲೆ ಬರೆದಿದೆ. ಇದರ ನಡುವೆ ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ IPL 2022ರ ಪಾಯಿಂಟ್ ಟೇಬಲ್  ಹೇಗಿದೆ?, ಆರೆಂಜ್  ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ : ಸೂಕ್ತ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಪಾಯಿಂಟ್ ಟೇಬಲ್:

  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಸಾಧಿಸಿ ಒಟ್ಟು 6 ಅಂಕದೊಂದಿಗೆ +0.951 ರನ್​​ರೇಟ್ ಹೊಂದಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಆಡಿದ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಎರರಡಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.446 ರನ್​​ರೇಟ್​ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
  • ಕೆಳ ಕ್ರಮಾಂಕದಲ್ಲಿದ್ದ ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಬಳಿಕ ಮೂರನೇ ಸ್ಥಾನಕ್ಕೆ ಜಿಗಿದಿದೆ. 6 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.239 ಆಗಿದೆ.
  • ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 6 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.174.
  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಎಸ್​ಆರ್​​ಹೆಚ್ ವಿರುದ್ಧದ ಸೋಲಿನ ಬಳಿಕ ಆಡಿದ ನಾಲ್ಕು ಪಂದ್ಯದಲ್ಲಿ ಒಂದರಲ್ಲಿ ಸೋಲಿ ಮೂರರಲ್ಲಿ ಗೆದ್ದು ಬೀಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.097.
  • ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರನೇ ಸ್ಥಾನಕ್ಕೆ ಕುಸಿದಿದೆ. ಆರು ಅಂಕದೊಂದಿಗೆ RCB ನಿವ್ವಳ ರನ್ ರೇಟ್ 0.006 ಆಗಿದೆ.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ -0.476 ಆಗಿದೆ.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಆಡಿದ ನಾಲ್ಕು ಪಂದ್ಯಗಳಲ್ಲಿ ಎರಡಲ್ಲಿ ಜಯ ಸಾಧಿಸಿದ್ದು 4 ಅಂಕ ಸಂಪಾದಿಸಿ ಎಂಟನೇ ಸ್ಥಾನದಲ್ಲಿದೆ. ಹೈದರಾಬಾದ್ ನಿವ್ವಳ ರನ್ ರೇಟ್ -0.501.
  • ಇತ್ತ ಆಡಿದ ನಾಲ್ಕು ಪಂದ್ಯಗಳಲ್ಲಿ ಐದು ಪಂದ್ಯಗಳಲ್ಲಿ ಪೈಕಿ 4 ರಲ್ಲಿ ಸೋಲು ಒಂದರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 2 ಅಂಕದೊಂದಿಗೆ -0.745 ರನ್​ರೇಟ್​​ನೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಐದು ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.072.

ಡಾ.ಬಿ.ಆರ್.ಅಂಬೇಡ್ಕರ್‌ ಅವರ 131ನೇ ಜಯಂತಿ : ಸಂವಿಧಾನ ಶಿಲ್ಪಿಯನ್ನು ಸ್ಮರಿಸಿದ ಪ್ರಧಾನಿ ಮೋದಿ, ರಾಹುಲ್

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ಇದ್ದು ಇವರು ನಾಲ್ಕು ಪಂದ್ಯಗಳಿಂದ 218 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಎರಡನೇ ಸ್ಥಾನದಲ್ಲಿ ಸಿಎಸ್​ಕೆ ತಂಡದ ಶಿವಂ ದುಬೆ ಅವರಿದ್ದು 5 ಪಂದ್ಯಗಳಲ್ಲಿ 207 ರನ್ ಸಿಡಿಸಿದ್ದಾರೆ. ಮೂರನೇ ಸ್ಥಾನಕ್ಕೆ ಪಂಜಾಬ್ ತಂಡದ ಶಿಖರ್ ಧವನ್ ಜಿಗಿದಿದ್ದು 197 ರನ್ ಗಳಿಸಿದ್ದಾರೆ. ರಾಬಿನ್ ಉತ್ತಪ್ಪ ನಾಲ್ಕನೇ ಸ್ಥಾನದಲ್ಲಿದ್ದು 5 ಪಂದ್ಯಗಳಿಂದ 194 ರನ್ ಕಲೆಹಾಕಿದ್ದಾರೆ. ಲಖನೌ ತಂಡದ ಕ್ವಿಂಟನ್ ಡಿಕಾಕ್ ಐದು ಪಂದ್ಯಗಳಿಂದ 188 ರನ್ ಸಿಡಿಸಿ ಐದನೇ ಸ್ಥಾನ ಸಂಪಾದಿಸಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರತಿಕ್ರಿಯೆ

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ನಾಲ್ಕು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 11 ವಿಕೆಟ್ ಕಬಳಿಸಿದ್ದಾರೆ. ಕೆಕೆಆರ್ ತಂಡದ ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇವರು ಆಡಿರುವ 5 ಪಂದ್ಯಗಳಿಂದ 10 ವಿಕೆಟ್ ಕಿತ್ತಿದ್ದಾರೆ. ಕುಲ್ದೀಪ್ ಯಾದವ್ 5 ಪಂದ್ಯಗಳಿಂದ 10 ವಿಕೆಟ್ ಪಡೆದು ದಿಢೀರ್ ಮೂರನೇ ಸ್ಥಾನಕ್ಕೇರಿದ್ದಾರೆ. ಆರ್​​ಸಿಬಿ ತಂಡದ ವನಿಂದು ಹಸರಂಗ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದು, ಇವರು ಆಡಿದ ಐದು ಪಂದ್ಯಗಳಿಂದ 10 ವಿಕೆಟ್ ಕಿತ್ತಿದ್ದಾರೆ. 8 ವಿಕೆಟ್ ಕಿತ್ತ ಟಿ. ನಟರಾಜನ್ ಐದನೇ ಸ್ಥಾನದಲ್ಲಿದ್ದಾರೆ.

ಯಶವಂತಪುರದ ಸಂವಿಧಾನ ವೃತ್ತದಲ್ಲಿ ಅಂಬೇಡ್ಕರ್ ಜಯಂತ್ಯುತ್ಸವ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap