ದೊಡ್ಡಬಳ್ಳಾಪುರ:
ರಾಜೀನಾಮೆ ನೀಡುವಂತೆ ಒತ್ತಾಯಿಸಿ ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ಮೇಲೆ ಗ್ರಾಪಂ ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ರಂಗಸ್ವಾಮಿ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಅರೆ ಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕೆಲ ಸದಸ್ಯರು ಹಾಗೂ ಪ್ರಭಾವಿ ಮುಖಂಡ ಶೈಲೇಂದ್ರ, ಅಧ್ಯಕ್ಷ ರಂಗಸ್ವಾಮಿಗೆ ರಾಜೀನಾಮೆ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲೂಕು ಉಪ ವಿಭಾಗಾಧಿಕಾರಿಗಳ ಕಚೇರಿಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ರಂಗಸ್ವಾಮಿ ರಾಜೀನಾಮೆ ನೀಡಲು ಒಪ್ಪದಿದ್ದಾಗ ತಳ್ಳಾಟ ನೂಕಾಟ ನಡೆದು, ಅಧ್ಯಕ್ಷನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
