ಬೆಳಗಾವಿ:
ಬಿಜೆಪಿಯಿಂದ ಇನಷ್ಟು ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ. ಅವರ ಜೊತೆಯಲ್ಲಿಯೇ ನಾವು ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಮ್ಮಲ್ಲಿ ಯಾವುದೇ ಒಳ ಜಗಳವಿಲ್ಲ. 135 ಶಾಸಕರೂ ಒಟ್ಟಾಗಿದ್ದೇವೆ ಎಂದರು.
ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಅನೇಕರು ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ. ಅವರನ್ನು ಕರೆದುಕೊಂಡು ನಾವು ಲೋಕಸಭಾ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.