ಬೆಂಗಳೂರು :
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ನವೆಂಬರ್ 10 ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ನವೆಂಬರ್ 10 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ದಾವಣಗೆರೆ, ಕೋಲಾರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.