ರಾಜ್ಯಸಭೆಗೆ ಬಿಜೆಪಿ ಅಚ್ಚರಿಯ ಆಯ್ಕೆ!!

ಬೆಂಗಳೂರು:

ಅಶೋಕ್ ಗಸ್ತಿ
ಅಶೋಕ್ ಗಸ್ತಿ, ಈರಣ್ಣ ಕಡಾಡಿ

     ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೂರು ಹೆಸರುಗಳನ್ನು ತಿರಸ್ಕರಿಸಿ ಇಬ್ಬರು ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

      ರಾಜ್ಯಸಭಾ ಚುನಾವಣೆಗೆ ಬಿಜೆಪಿ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ.

      ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಭಾರಿ ಪೈಪೋಟಿ ಕಂಡುಬಂದಿತ್ತು. ಆದರೆ ಸದ್ಯ ಬಿಜೆಪಿ ವರಿಷ್ಠರು ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರಿಗೆ ಟಿಕೆಟ್ ನೀಡಿದೆ.

     ಅಶೋಕ್ ಗಸ್ತಿಯವರು ರಾಯಚೂರು ಜಿಲ್ಲೆಯವರಾಗಿದ್ದು, ಕಲ್ಯಾಣ ಕರ್ನಾಟಕ ವಿಭಾಗೀಯ ಪ್ರಭಾರಿಯಾಗಿದ್ದಾರೆ.

ಈರಣ್ಣ ಕಡಾಡಿ ಬಯೋಡೇಟಾ :

       ಮೂಡಲಗಿ ತಾಲೂಕಿನ ಕಲ್ಲೊಳ್ಳಿ ಗ್ರಾಮದಲ್ಲಿ 01-06-1966ರಂದು ಜನಿಸಿದ ಈರಣ್ಣ ಕಡಾಡಿ, 1989 ರಿಂದ ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಅರಭಾಂವಿ ಕ್ಷೇತ್ರದ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭ ಮಾಡಿದರು.

      ಗೋಕಾಕ್ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿದ್ದವರು. ನಂತರ 1994 ರಲ್ಲಿ ಅರಭಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡು, ಕಾಂಗ್ರೆಸ್ ನ ಮಾಜಿ ಸಚಿವ ವ್ಹಿ.ಎಸ್.ಕೌಜಲಗಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು.

      ಮತ್ತೆ 2004ರಲ್ಲಿ ಬೆಳಗಾವಿ ಗ್ರಾಮೀಣ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದರು. 2010ರಲ್ಲಿ ಬೆಳಗಾವಿ ಜಿ.ಪಂ.ಅಧ್ಯಕ್ಷರಾಗಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಮೊದಲಿನಿಂದಲೂ ಆರ್‌ಎಸ್‌ಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಈರಣ್ಣ ಕಡಾಡಿ, ಸದ್ಯ ಬಿಜೆಪಿ ವಿಭಾಗೀಯ ಪ್ರಭಾರಿಯಾಗಿದ್ದಾರೆ.

      ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ,ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಭಾಗದ ಬಿಜೆಪಿ ವಿಭಾಗೀಯ ಪ್ರಭಾರಿ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link