ವಿಜಯಪುರ
ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರ ಪರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ರೋಡ್ ಶೋ ನಡೆಸಿದರು.
ಶಿವಗಣೇಶ ಸರ್ಕಲ್‌ನಿಂದ ಆರಂಭವಾದ ರೋಡ್ ಶೋ ಚನ್ನರಾಯಪಟ್ಟಣ ವೃತ್ತ ಮೂಲಕ ಜಿ.ಎಂ ವೃತ್ತ, ಎಲ್ಲಮ್ಮತಾಯಿ ದೇವಾಲಯದಿಂದ ಗಾಂಧಿಚೌಕದವರೆಗೂ ನಡೆಯಿತು.ಮಹಿಳೆಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ರಕ್ಷಾರಾಮಯ್ಯ ಅವರ ಕುಟುಂಬ ಹಿಂದಿನಿಂದಲೂ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಈ ಮೂಲಕ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸೇವೆ ಒದಗಿಸುತ್ತಾ ಬಂದಿದೆ ಎಂದು ಹೇಳಿದರು.
ಅಭ್ಯರ್ಥಿ ರಕ್ಷಾ ರಾಮಯ್ಯ ಮಾತನಾಡಿ, ‘ಈ ಭಾಗದ ಜನರ ಸಮಸ್ಯೆಗಳು ನನಗೆ ಅರಿವಿದೆ. ಈ ಭಾಗದ ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡಿದ್ದೇನೆ. ಎಲ್ಲಾ ಸಮಸ್ಯೆಗಳಿಗೂ ಮುಕ್ತಿ ನೀಡುವ ಕೆಲಸವನ್ನು ಹಿರಿಯ ಮಾರ್ಗದರ್ಶನದಲ್ಲಿ ಮಾಡಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ