ಡ್ರಗ್ಸ್‌ ಪ್ರಕರಣದಲ್ಲಿ ರಕುಲ್‌ ಸಹೋದರನ ಬಂಧನ ….!

ಹೈದರಾಬಾದ್:

   ಅಂತಾರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಇಂದು ಹೈದರಾಬಾದ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಅವರಿಂದ 35 ಲಕ್ಷ ರೂಪಾಯಿ ಮೌಲ್ಯದ ಸುಮಾರು 200 ಗ್ರಾಂ ಕೊಕೇನ್ ವಶಪಡಿಸಿಕೊಂಡಿದ್ದಾರೆ.

   ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಅಮನ್ ಪ್ರೀತ್ ಅವರನ್ನು ಬಂಧಿಸಲಾಗಿದೆ. ಅವರು ಡ್ರಗ್ ಸೇವನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಹೈದರಾಬಾದ್ ಪೊಲೀಸರು ಖಚಿತಪಡಿಸಿದ್ದಾರೆ.ಬಂಧಿತ ಪೆಡ್ಲರ್ ಗಳು ನೈಜೀರಿಯಾದಿಂದ ಡ್ರಗ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಶಂಶಾಬಾದ್ ಉಪ ಪೊಲೀಸ್ ಆಯುಕ್ತ ಶ್ರೀನಿವಾಸ್ ಅವರು ತಿಳಿಸಿದ್ದಾರೆ.

  ಈ ಹಿಂದೆ 2020ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಕುಲ್ ಪ್ರೀತ್ ಸಿಂಗ್ ಅವರಿಗೆ ಎನ್ ಸಿಬಿ ನೀಡಿತ್ತು ಮತ್ತು ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap