ಆನೇಕಲ್:
ಕೋವಿಡ್ ಸೋಂಕು ಹೆಚ್ಚಾಗುತ್ತಿರುವುದರ ಸಂಬಂಧ ಸಾರಿಗೆ ಬಸ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ರಾಜ್ಯ ಸರಕಾರದ ಗೈಡ್ ಲೆನ್ಸ್ ಗೆ ಕಾಯುತ್ತಿದ್ದೇವೆಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಂಡ್ ಸೋಂಕು ಹೆಚ್ಚಾಗುತ್ತಿರುವುದರಿಂದ ಸಾರಿಗೆ ಬಸ್ ಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರ ಸಂಬಂಧ ರಾಜ್ಯ ಸರಕಾರ ಸೂಚಿಸುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ತಿಳಿಸಿದರು.
ಈ ವೇಳೆ ಶಾಸಕ ಬಿ.ಶಿವಣ್ಣ, ಪರಿಷತ್ ಸದಸ್ಯ ರಾಮೋಜಿ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
