BJP ಎಂದರೆ ಬುರುಡೆ‌ ಜನರ ಪಕ್ಷ: ರಾಮಲಿಂಗಾ ರೆಡ್ಡಿ

ಬೆಂಗಳೂರು:

    ಬಿಜೆಪಿ ಕರ್ನಾಟಕ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಿಡಿ ಕಾರಿದ್ದಾರೆ.

   ಬಿಜೆಪಿ ಪೋಸ್ಟ್ ಉಲ್ಲೇಖಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ₹5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಅದಕ್ಕಾಗಿ, ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇ ಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ ಎಂದು ರಾಮಲಿಂಗಾರೆಡ್ಡಿ ತಪರಾಕಿ ಹಾಕಿದ್ದಾರೆ.

   ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿ.ಜೆ.ಪಿ ಅವರು. ಬಿ.ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ 2 ಲಕ್ಷ 30 ಸಾವಿರ ಕೋಟಿ ರು. ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ ಮಾತನಾಡಿ, 1947 ರಿಂದ 2014 ರವರೆಗೆ ದೇಶದ‌ 67 ವರ್ಷಗಳ ಇತಿಹಾಸದಲ್ಲಿ ಎಲ್ಲಾ ಪ್ರಧಾನಮಂತ್ರಿಗಳು ಮಾಡಿದ ಸಾಲ ಸುಮಾರು 53 ಲಕ್ಷ ಕೋಟಿಗಳು ಎಂದು ತಿರುಗೇಟು ನೀಡಿದ್ದಾರೆ.

   ಇಂದಿನ ಕೇಂದ್ರ ಸರ್ಕಾರದ ಮಾಡಿರುವ ಸಾಲ 2014-2025 ರ ಅವಧಿಗೆ 149 ಲಕ್ಷ ಕೋಟಿಗಳು. ಇಲ್ಲಿಯವರೆಗೆ ಒಟ್ಟು ಸಾಲ ಇರುವುದು 202 ಲಕ್ಷ ಕೋಟಿ. ಅಂದರೆ ಅತ್ಯಂತ ಕಡಿಮೆ ಅವಧಿಯಲ್ಲಿ ಅತೀ ಹೆಚ್ಚು ಸಾಲ‌ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲಬೇಕು. ದೇಶದ ಜನರಿಗೆ ಸುಳ್ಳು ಅಂಕಿ ಅಂಶಗಳನ್ನು ನೀಡಿ, ದಾರಿ ತಪ್ಪಿಸುತ್ತಾ, ಜನರ ಆರ್ಥಿಕ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯಾವುದೇ ಪ್ರಶ್ನೆಗೆ ಉತ್ತರ ನೀಡದಿರುವುದು ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Recent Articles

spot_img

Related Stories

Share via
Copy link