ಬೆಂಗಳೂರು:
ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಪತ್ರಕರ್ತವ ಪತ್ನಿಗೆ ನೋಟಿಸ್ ಜಾರಿ ಮಾಡಿದೆ.
ತುಮಕೂರು ಜಿಲ್ಲೆ ಶಿರಾ ನಿವಾಸಿಯಾದ ಪತ್ರಕರ್ತ ಖಾಸಗಿ ಚಾನೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದಾನೆ. ಪತ್ರಕರ್ತನ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದ್ದು, ಸಿಡಿ ಕೇಸ್ ನಲ್ಲಿ ಆತ ಮಹತ್ವದ ಪಾತ್ರ ವಹಿಸಿದ್ದ ಎಂದು ಅಂದಾಜಿಸಲಾಗಿದೆ. ಹೀಗಾಗಿ ಆತನ ಪತ್ನಿಗೆ ನೊಟೀಸ್ ನೀಡಿರುವ ಎಸ್‌ಐಟಿ ತಂಡ, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚಿಸಿದೆ.
ಸೋಮವಾರ ಮೂರ್ನಾಲ್ಕು ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ, ಸಿಡಿಯಲ್ಲಿರುವ ಮಹಿಳೆ ಸೇರಿದಂತೆ ಹಲವರಿಗಾಗಿ ಶೋಧ ನಡೆಸಲಾಗುತ್ತಿದೆ, ಯಾರನ್ನು ಬಂಧಿಸಿದ್ದೇವೆ, ಯಾರನ್ನೂ ಬಂಧಿಸಲಾಗಿಲ್ಲ ಎಂಬ ಬಗ್ಗೆ ನಾವು ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಿಡಿ ಕೇಸ್ ಸಂಬಂಧ ಹಲವು ಮಂದಿಗೆ ನೋಟೀಸ್ ನೀಡಲಾಗಿದೆ, ಆದರೆ ಈ ಹಂತದಲ್ಲಿ ಅವರ ಹೆಸರುಗಳನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಎಸ್ ಐಟಿ ಮುಖ್ಯಸ್ಥ ಹಾಗೂ ಬೆಂಗಳೂರು ಪಶ್ಚಿಮ ವಿಭಾಗದ ಎಸಿಪಿ ಸೌಮೇಂದು ಮುಖರ್ಜಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ