ಬೆಂಗಳೂರು:
ನನ್ನ ಕಾರ್ಖಾನೆಯಿಂದ ಬಾಕಿ ಇದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಯುತ್ತಿರುವ ಸಭೆಗೆ ಏಕೆ ಹಾಜರಾಗಿಲ್ಲ ಎಂಬುವುದನ್ನು ಸಿಎಂ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇನೆ. ಆದರೆ ಮಾಧ್ಯಮಗಳಲ್ಲಿ ನನ್ನ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಗೆ 20 ಕೋಟಿ ರೂ. ಬಾಕಿ ಇದೆ ವರದಿಯಾಗಿದೆ. ಅಷ್ಟು ಹಣ ಬಾಕಿ ಇದ್ದರೆ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಇಂದು ನಗರದ ವಿಧಾನಸೌಧದಲ್ಲಿ ನಿಗದಿಯಾಗಿದ್ದ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರು ಭಾಗವಹಿಸದೆ ಗೈರಾಗಿದ್ದರು. ರಮೇಶ್ ಜಾರಕಿಹೊಳಿ ಅವರ ಕಂಪನಿಯಿಂದ 20 ಕೋಟಿ ರೂ. ಬಾಕಿ ಇದೆ ಎನ್ನಲಾಗಿತ್ತು. ರೈತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಈ ಕುರಿತು ಯಾವುದೇ ಹೇಳಿಕೆ ನೀಡಲ್ಲ ಎಂದು ಹೇಳಿದ್ದರು.