ಮಹೇಶ್‌ ಕುಮಟ್ಟಳ್ಳಿ ಪರ‌ ಸಾಹುಕಾರ್‌ ಬ್ಯಾಟಿಂಗ್…!

ಬೆಂಗಳೂರು

     ಸದ್ಯ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ಲಾಬಿಗಳು ತಾರಕ್ಕೇರಿದ್ದು ತಮ್ಮ ಆಪ್ತರು ಮತ್ತು ಪರಮಾಪ್ತರಿಗೆ ಟಿಕೆಟ್‌ ಗಿಟ್ಟಿಸಲು ಹಾಲಿಗಳು ವಿವಿಧ ಕಸರತ್ತು ಆರಂಭಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಿಂದ ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಬಿಜೆಪಿ ಟಿಕೆಟ್ ನೀಡದಿದ್ದರೇ ನಾನೂ ಕೂಡ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

     ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ರಮೇಶ್ ಜಾರಕಿಹೊಳಿ, ತಮ್ಮ ಬೆಂಬಲಿಗ ಮಹೇಶ ಕುಮಟಳ್ಳಿ ಅವರಿಗೆ ಪಕ್ಷ ಟಿಕೆಟ್ ನೀಡದಿದ್ದರೆ ಗೋಕಾಕದಿಂದ ಬಿಜೆಪಿ ಅಭ್ಯರ್ಥಿಯಾಗಿ ತಾವು ಚುನಾವಣೆ ಎದುರಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ್ ಕುಮಟಳ್ಳಿಗೆ ಟಿಕೆಟ್ ನೀಡಲೇ ಬೇಕು ಎಂಬ ಒತ್ತಡವನ್ನು ಆಡಳಿತರೂಢ ಬಿಜೆಪಿ ಮೇಲೆ ಹಾಕುತ್ತಿದ್ದಾರೆ.
    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಎಲ್ಲಾ ಹಾಲಿ ಶಾಸಕರಿಗೆ ಈ ಬಾರಿ ಪಕ್ಷದಿಂದ ಟಿಕೆಟ್ ಸಿಗದಿರಬಹುದು ಮಾಡದಿರಬಹುದು ಎಂದು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಮತ್ತು ಹಾಲಿ ಸಿಎಂಗಳ ಮಾತು ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಅವರ ಕೆಲವು ಬೆಂಬಲಿಗರಿಗೆ ಟಿಕೆಟ್ ಸಿಗದಿರಬಹುದು ಎಂಬ ಊಹಾಪೋಹಕ್ಕೆ ಕಾರಣವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap