ದರ್ಶನ್‌ ಜಾಮೀನು ರದ್ದು ಬೆನ್ನಲ್ಲೇ ಗಮನ ಸೆಳೆದ ರಮ್ಯಾ ಪೋಸ್ಟ್‌…..!

ನವದೆಹಲಿ: 

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ನಟ ದರ್ಶನ್‌ಗೆ  ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಂಡಿದೆ. ಬೇಲ್‌ ರದ್ದುಗೊಳಿಸಿ ಇಂದು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ತಕ್ಷಣ ಎಲ್ಲಾ ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಆ ಮೂಲಕ ದರ್ಶನ್‌ ಬೇಲ್‌ ರದ್ದುಗೊಳಿಸಲು ಕಾನೂನು ಸಮರ ನಡೆಸಿದ್ದ ರಾಜ್ಯ ಸರ್ಕಾರಕ್ಕೆ ದೊಡ್ಡ ಗೆಲುವು ಸಿಕ್ಕಂತಾಗಿದೆ. ಇನ್ನು ದರ್ಶನ್‌ ಬೇಲ್‌ ರದ್ದಾಗುತ್ತಿದ್ದಂತೆ ನಟಿ ರಮ್ಯಾ ಪೋಸ್ಟ್‌ವೊಂದನ್ನು ಮಾಡಿದ್ದು, ಭಾರೀ ಗಮನ ಸೆಳೆಯುತ್ತಿದೆ.

   ಕೆಲವು ದಿನಗಳ ಹಿಂದೆ ನಟಿ ರಮ್ಯಾಗೆ ಡಿ ಬಾಸ್‌ ಫ್ಯಾನ್ಸ್‌ ಅಶ್ಲೀಲ ಮೆಸೇಜ್‌ ಮಾಡಿ ಭಾರೀ ವಿವಾ ಸೃಷ್ಟಿಯಾಗಿತ್ತು. ಇದೇ ವಿಚಾರವಾಗಿ ರಮ್ಯಾ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದರು. ಬಳಿಕ ಐದು ಜನರನ್ನೂ ಅರೆಸ್ಟ್‌ ಮಾಡಲಾಗಿತ್ತು. ಅಲ್ಲದೇ ದರ್ಶನ್‌ ತಮ್ಮ ಫ್ಯಾನ್ಸ್‌ಗೆ ಬುದ್ದಿ ಹೇಳಬೇಕೆಂದೂ ರಮ್ಯಾ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು. ಇದೀಗ ದರ್ಶನ್‌ ಜಾಮೀನು ರದ್ದಾಗುತ್ತಿದ್ದಂತೆ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಆ ಮೂಲಕ ದರ್ಶನ್‌ ಆಂಡ್‌ ಟೀಮ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ramya post

ರಮ್ಯಾ ಪೋಸ್ಟ್‌ನಲ್ಲಿ ಏನಿದೆ?

    ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಇತರೆ ಆರೋಪಿಗಳ ಜಾಮೀನು ರದ್ದುಗೊಂಡಿದೆ. ಇದು ಕಾನೂನಿನ ಮುಂದೆ ಎಲ್ಲರೂ ಸಮಾನ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತದೆ. ನಮ್ಮ ಕರ್ತವ್ಯವನ್ನು ನಾವು ಮಾಡೋಣ. ಕಾನೂನಿನ ಮೇಲೆ ನಂಬಿಕೆ ಇಡೋಣ. ಹಾದಿ ಕಷ್ಟ ಇರಬಹುದು. ಆದರೆ ಕೊನೆಯಲ್ಲಿ ಬರವಸೆಯ ಬೆಳಕು ಇದ್ದೇ ಇದೆ. ಕಾನೂನನ್ನು ಎಂದೂ ಕೈಗೆ ತಗೋಬೇಡಿ. ನ್ಯಾಯ ಎಲ್ಲರಿಗೂ ಸಿಕ್ಕೇ ಸಿಗುತ್ತದೆ ಎಂದು ಬರೆದುಕೊಂಡಿದ್ದಾರೆ.

Recent Articles

spot_img

Related Stories

Share via
Copy link