ಬೆಂಗಳೂರು:
ದಿನದಿಂದ ದಿನಕ್ಕೆ ರಾಜ್ಯ ರಾಜಕೀಯದಲ್ಲಿ ಯಾರು ಎಲ್ಲಿಂದ ಸ್ಪರ್ಧೆ ಮಾಡಬೇಕು ಅಂತ ಲೆಕ್ಕಾಚಾರ ಹಾಕಲಾಗುತ್ತಿದೆ. ಈ ಬೆನ್ನಲ್ಲೇ ಕೆಲವು ದಿನಗಳಿಂದ ರಮ್ಯಾ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋ ಸುದ್ದಿ ಓಡಾಡುತ್ತಿತ್ತು.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧವಾಗಿ ರಮ್ಯಾರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಚಿಂತಿಸುತ್ತಿದೆ. ಹೆಚ್‌ಡಿಕೆಯನ್ನು ಸೋಲಿಸಲು ಡಿಕೆ ಶಿವಕುಮಾರ್ ರಣತಂತ್ರ ರೂಪಿಸಿದ್ದಾರೆಂದು ರಾಜಕೀಯ ವಲಯ ಹಾಗೂ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಾಜಿ ಸಂಸದೆ ರಮ್ಯಾ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿಯನ್ನು ಡಿಕೆ ಸುರೇಶ್ ತಳ್ಳಿಹಾಕಿದ್ದಾರೆ. ಬೊಂಬೆ ನಾಡಿನಿಂದ ರಮ್ಯಾ ಸ್ಪರ್ಧೆ ಮಾಡುವುದು ಸುಳ್ಳು ಎಂದು ಈಗಾಗಲೇ ಹರಡುತ್ತಿರುವ ಸುದ್ದಿಯನ್ನು ಸಂಸದ ಡಿ.ಕೆ.ಸುರೇಶ್ ಅಲ್ಲಗಳೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








