ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಸುಟ್ಟು ಹಾಕಿದ ದುರುಳರು

ಚಿತ್ರದುರ್ಗ:

    ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಚಿತ್ರದುರ್ಗದಲ್ಲಿ  ವಿದ್ಯಾರ್ಥಿನಿ ಮೇಲೆ ಅತ್ಯಾಚಾರ  ಎಸಗಿ ಕೊಲೆ  ಮಾಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವರ್ಷಿತಾ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ಪದವಿ ವಿದ್ಯಾರ್ಥಿನಿಯಾಗಿದ್ದು, ಈಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.

    ನಿನ್ನೆ ವರ್ಷಿತಾ ಶವ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದಲ್ಲಿ ಸ್ಥಳದಲ್ಲಿ ಉದ್ವಿಗ್ನತೆ ನೆಲೆಸಿದ್ದು, ಈ ಬರ್ಬರ ಕೃತ್ಯ ಎಸಗಿದವರನ್ನು ಹಿಡಿದು ಕಠೋರ ಶಿಕ್ಷೆ ನೀಡಬೇಕು ಎಂದು ಕುಟುಂಬದವರು, ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳೀಯ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ ಹಾಗೂ ಇತರ ವಿವರಗಳನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ. ಒಬ್ಬನಿಗಿಂತ ಹೆಚ್ಚು ಜನ ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ. ವೈಯಕ್ತಿಕ ದ್ವೇಷದ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

Recent Articles

spot_img

Related Stories

Share via
Copy link