ರೇಷನ್‌ ಕಾರ್ಡ್‌ ಗೆ ಅರ್ಜಿ ಹಾಕುತ್ತಿದ್ದೀರಾ …..ನಿಲ್ಲಿ : ಒಮ್ಮೆ ಇದನ್ನು ಓದಿ….!

ಬೆಂಗಳೂರು: 

    ರೇಷನ್‌ ಕಾರ್ಡ್‌ ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ಕಡ್ಡಾಯ ದಾಖಲೆಯಾಗಿದೆ. ಇದಲ್ಲದೆ, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲಕರ ಪರವಾನಗಿ, ಪ್ಯಾನ್ ಕಾರ್ಡ್‌ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ.

   ಬಿಪಿಎಲ್ ಕಾರ್ಡ್ ವಿತರಿಸುವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಸದ್ಯಕ್ಕೆ ಬಿಪಿಎಲ್ ಕಾರ್ಡ್ ವಿತರಣೆ ಇಲ್ಲ. ಹಳೆಯ ಅರ್ಜಿಗಳ ವಿಲೇವಾರಿ ನಂತರವೇ ಹೊಸ ಅರ್ಜಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಹೇಳಲಾಗಿದೆ. ಬಡ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ವಿತರಣೆಗಾಗಿ ಆದ್ಯತೆ ಮೇರೆಗೆ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಬೇಕಿದೆ. ಸುಮಾರು ಎರಡು ವರ್ಷಗಳಿಂದ ಅರ್ಜಿ ಆಹ್ವಾನಿಸಿಲ್ಲ. ಇದರಿಂದಾಗಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಹೆಚ್ಚುವರಿ ಅಕ್ಕಿ ಬದಲು ಹಣ ಪಡೆದುಕೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದೆ.

   ಬಡತನ ರೇಖೆಗಿಂತ ಕೆಳಗಿರುವವರು ಉಚಿತ ಆಹಾರ ಧಾನ್ಯ ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದ್ದು, ಈಗಾಗಲೇ ಗುರಿ ಮೀರಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಮತ್ತೆ ಲಕ್ಷಾಂತರ ಕಾರ್ಡ್ ಗಳನ್ನು ವಿತರಿಸಿದರೆ ಹೊರೆಯಾಗಲಿದೆ. ರಾಜ್ಯದಲ್ಲಿ 2013 ರ ಜನಸಂಖ್ಯೆ ಆಧಾರದ ಮೇಲೆ 1.15 ಕೋಟಿ ಪಡಿತರ ಚೀಟಿ ವಿತರಿಸುವ ಗುರಿ ನಿಗದಿಪಡಿಸಿದ್ದು,

   1.48 ಕೋಟಿ ಕಾರ್ಡ್ ಗಳನ್ನು ವಿತರಿಸಲಾಗಿದೆ. ಹಳೆಯ ಅರ್ಜಿಗಳೇ ಸುಮಾರು 2 ಲಕ್ಷಕ್ಕೂ ಅಧಿಕ ಇರುವುದರಿಂದ ಇವುಗಳನ್ನು ವಿಲೇವಾರಿ ಮಾಡಿದ ನಂತರ ಹೊಸ ಅರ್ಜಿಗಳ ಸ್ವೀಕರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಇದರಿಂದಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ನಿರಾಸೆಯಾಗಿದೆ.

    ಕರ್ನಾಟಕದಲ್ಲಿ ಹೊಸ ಪಡಿತರ ಚೀಟಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಆದರೆ, ಅರ್ಜಿದಾರರು ತಮ್ಮ ಪಡಿತರ ಚೀಟಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆಯುವಾಗ ಪಡಿತರ ಚೀಟಿಯ ಪ್ರತಿಯನ್ನು ಪಡೆಯಲು 100 ರೂ. ಪಾವತಿಸಬೇಕು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap