ರೇಷನ್‌ ಅರ್ಜಿ ಹಾಕಿದವರಿಗೆ ಸರ್ಕಾರದಿಂದ ಸಿಹಿ ಸುದ್ದಿ ..!

ಬೆಂಗಳೂರು:

    ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

   ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.

   ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು. 

Recent Articles

spot_img

Related Stories

Share via
Copy link