ಬೆಂಗಳೂರು:
ದೇವನಹಳ್ಳಿ ಬಳಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ರೇವ್ ಪಾರ್ಟಿ ನಡೀತಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿದ್ದು, 30ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ಪಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ ನಡೀತಿತ್ತು. ರಾತ್ರಿಯಿಂದ ಬೆಳಗಿನ ಜಾವದ ತನಕ ರೇವ್ ಪಾರ್ಟಿ ನಡೆದಿದೆ. ಸ್ಥಳೀಯರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ರೇವ್ ಪಾರ್ಟಿಯಲ್ಲಿ 30ಕ್ಕೂ ಹೆಚ್ಚು ಯುವಕ ಯುವತಿಯರು ಮೈ ಮರೆತಿದ್ದುದು ಕಂಡುಬಂದಿದೆ.
ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದ ಯುವಕ-ಯುವತಿಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಯುವಕ ಯುವತಿಯರ ವಿಚಾರಣೆ ಅಂತ್ಯದ ಬಳಿಕ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದವರನ್ನು ಪೊಲೀಸ್ ವ್ಯಾನ್‌ನಲ್ಲಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕ್ ಅಪ್ ಕೂಡ ಮಾಡಿಸಿದ್ದಾರೆ. ಮೆಡಿಕಲ್ ಟೆಸ್ಟ್ ಬಳಿಕ ಎಲ್ಲರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಬಳಿ ಮುಂಜಾನೆವರೆಗೂ ರೇವ್ ಪಾರ್ಟಿ ನಡೆದಿದ್ದು, ಇದು ನಡೆದ ಫಾರ್ಮ್ ಹೌಸ್ ಪ್ರಭಾವಿ ರಿಯಲ್ ಎಸ್ಟೇಟ್ ಮಾಲಿಕರಿಗೆ ಸೇರಿದೆ ಎಂದು ತಿಳಿದುಬಂದಿದೆ. ರೇವ್ ಪಾರ್ಟಿಯಲ್ಲಿ ಆಲ್ಕೋಹಾಲ್ ಸೇರಿದಂತೆ ಸಾಕಷ್ಟು ಮಾದಕ ದ್ರವ್ಯ ಕಂಡುಬಂದಿದೆ. ಇವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.