ರಾಹುಲ್ ಗಾಂಧಿ ವಿರುದ್ಧ ಹೇಳಿಕೆ: ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ FIR

ಬೆಂಗಳೂರು:

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ FIR ದಾಖಲಾಗಿದೆ.ಭಾರತದಲ್ಲಿನ ಸಿಖ್ಖರ ಸ್ಥಿತಿಗತಿ ಕುರಿತು ಅಮೆರಿಕದಲ್ಲಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಹೇಳಿಕೆ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

   ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ರವನೀತ್ ಸಿಂಗ್ ಬಿಟ್ಟು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 353 (2) (ಸುಳ್ಳು ಮಾಹಿತಿ, ವದಂತಿಗಳು ಅಥವಾ ಆತಂಕಕಾರಿ ಸುದ್ದಿಗಳೊಂದಿಗೆ ಹೇಳಿಕೆ ಅಥವಾ ವರದಿ ಮಾಡುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು), 192 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು) ಭಾರತೀಯ ನ್ಯಾಯ ಸಂಹಿತೆಯ 196 (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪಡಿಸುವುದು) ಮತ್ತು 196ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.ನಂಬರ್ ಒನ್ ಭಯೋತ್ಪಾದಕ

   ರವನೀತ್ ಸಿಂಗ್ ಬಿಟ್ಟು ಈ ಹಿಂದೆ ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂ.1 ಭಯೋತ್ಪಾದಕ’ ಎಂದು ವಿವಾದಾತ್ಮಕ ಹೇಳಿದ್ದರು.’ಸಿಖ್ಖರಿಗೆ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲ ಎಂದು ಅಮೆರಿಕದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಸಿಖ್ಖರನ್ನು ಒಡೆಯಲು ಯತ್ನಿಸಿದ್ದಾರೆ. ಸಿಖ್ಖರು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂ ದಿಲ್ಲ. ಆದರೂ ಅವರನ್ನು ಒಂದು ಪಕ್ಷಕ್ಕೆ ಸೀಮಿತ ಮಾಡುವ ಯತ್ನ ನಡೆದಿದೆ. ಇಂಥ ಹೇಳಿಕೆ ನೀಡಿದ ರಾಹುಲ್‌ ಗಾಂಧಿ ದೇಶದ ನಂ.1 ಭಯೋತ್ಪಾದಕ. ಇಂದು ದೇಶವನ್ನು ವಿಭಜಿಸಿದವರು, ಬಾಂಬ್, ಮದ್ದುಗುಂಡು ಬಳಸಿದವರು, ರೈಲಿನಲ್ಲಿ ಸ್ಫೋ ಟ ನಡೆಸಿದವರು ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ. ತನಿಖಾ ಸಂಸ್ಥೆಗಳು ಯಾರನ್ನಾದರೂ ಬಂಧಿಸಬೇಕು ಎಂದರೆ ಮೊದಲು ಅದು ರಾಹುಲ್‌ ಗಾಂಧಿ ಎಂದು ಹೇಳಿದ್ದರು. 

   ಇದೇ ವೇಳೆ ತಮ್ಮ ವಿರುದ್ಧ ದಾಖಲಾಗುತ್ತಿರುವ ಪ್ರಕರಣ ಕುರಿತು ಮಾತನಾಡಿರುವ ರವನೀತ್ ಸಿಂಗ್ ಬಿಟ್ಟು, ‘ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕುಟುಂಬ ಸಿಖ್ಖರ ಮೇಲಿನ ದಾಳಿಗೆ ಹೆಸರುವಾಸಿಯಾಗಿದೆ. ಅಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸಿಖ್ಖರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದವು. ಈಗಲೂ ರಾಹುಲ್ ಗಾಂಧಿ ಆಗಾಗ್ಗೆ ಸಿಖ್ಖರ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ರಾಹುಲ್ ಗಾಂಧಿ ಬಗ್ಗೆ ಈ ಮಾತನ್ನು ಹೇಳಿಲ್ಲ. ಬದಲಿಗೆ, ನಾನು ಸಿಖ್ ಆಗಿರುವುದರಿಂದ ನನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಎಫ್‌ಐಆರ್‌ ದಾಖಲಿಸಿದರೆ ನನಗೇನೂ ವ್ಯತ್ಯಾಸವಾಗುವುದಿಲ್ಲ. ದಾಖಲಿಸಲಿ ಎಂದು ಸವಾಲು ಹಾಕಿದ್ದಾರೆ.

Recent Articles

spot_img

Related Stories

Share via
Copy link