ತಂದೆ – ಪಕ್ಕದ ಮನೆಯವನಿಂದಲೇ ಲೈಂಗಿಕ ದೌರ್ಜನ್ಯ : ಫೋಕ್ಸೊ ಪ್ರಕರಣ ದಾಖಲು

ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದಲ್ಲಿ ತನ್ನ ಪುಟ್ಟ ಮಗಳ ಮೇಲೆಯೇ ತಂದೆ ಹಾಗೂ ಪಕ್ಕದ ಮನೆಯ ವ್ಯಕ್ತಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

“ಲಿAಗಸೂಗೂರು ಪೊಲೀಸ್ ಠಾಣೆಯಲ್ಲಿ ಮೇ 12ರಂದು ಪ್ರಕರಣ ದಾಖಲಾಗಿತ್ತು. ಸಂತ್ರಸ್ತ ಬಾಲಕಿಯನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದೇವೆ. ಅಲ್ಲಿ ಅವರು ಹೇಳಿಕೆ ಕೊಟ್ಟಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದರು.

ನಾನು 9 ಹಾಗೂ 10ನೇ ತರಗತಿಯಲ್ಲಿದ್ದಾಗ ತಂದೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದಲ್ಲದೇ, ಪಕ್ಕದ ಮನೆಯ ವ್ಯಕ್ತಿಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಬಾಲಕಿ ನೀಡಿದ ದೂರಿನಲ್ಲಿದೆ. ಈ ಹೇಳಿಕೆಯ ನಂತರ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳಾದ ತಂದೆ ಮತ್ತು ಪಕ್ಕದ ಮನೆಯ ನಿವಾಸಿಯನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದೇವೆ. ನಂತರ ಅವರನ್ನು ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈ ಪ್ರಕರಣದ ತನಿಖೆ ಮುಂದುವರೆದಿದೆ. ಪೋಕ್ಸೋ ಮತ್ತು ಅಟ್ರಾಸಿಟಿ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Recent Articles

spot_img

Related Stories

Share via
Copy link