ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 22ನೇ ಪಂದ್ಯ ಏಪ್ರಿಲ್ 12ರ ಮಂಗಳವಾರದಂದು ಮುಂಬೈನ ಡಾ ಡಿ ವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಟ ನಡೆಸಿದವು.ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆಯಿತು.
ಹೌದು, ಟೂರ್ನಿಯಲ್ಲಿನ ತನ್ನ ಮೊದಲ 4 ಪಂದ್ಯಗಳಲ್ಲಿ ಸೋಲುವುದರ ಮೂಲಕ ಇದೇ ಮೊದಲ ಬಾರಿಗೆ ಈ ರೀತಿಯ ಕೆಟ್ಟ ಆರಂಭವನ್ನು ಪಡೆದುಕೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಐದನೇ ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ರಾಬಿನ್ ಉತ್ತಪ್ಪ 50 ಎಸೆತಗಳಲ್ಲಿ 88 ರನ್ ಮತ್ತು ಶಿವಂ ದುಬೆ 46 ಎಸೆತಗಳಲ್ಲಿ 95 ರನ್ ಬಾರಿಸಿ ಅಬ್ಬರಿಸಿದ ಪರಿಣಾಮ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿ ಎದುರಾಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 217 ರನ್‌ಗಳ ಗುರಿಯನ್ನು ನೀಡಿತು.
ಸಂತೋಷ್ ಆತ್ಮಹತ್ಯೆ ಪ್ರಕರಣ; ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ
ಹೀಗೆ ಬೌಲಿಂಗ್‌ನಲ್ಲಿ ತೀರಾ ಕಳಪೆ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ ಬೃಹತ್ ಗುರಿಯನ್ನು ಬೆನ್ನತ್ತುವಲ್ಲಿ ವಿಫಲವಾಯಿತು. ರಾಯಲ್ ಚಾಲೆಂಜರ್ಸ್ ಪರ ಗ್ಲೆನ್ ಮ್ಯಾಕ್ಸ್‌ವೆಲ್ 26, ಶಹಬಾಜ್ ಅಹ್ಮದ್ 41, ಸುಯಶ್ ಪ್ರಭುದೇಸಾಯಿ 34 ಮತ್ತು ದಿನೇಶ್ ಕಾರ್ತಿಕ್ 34 ರನ್ ಕಲೆಹಾಕಿ ಅಬ್ಬರಿಸಲು ಯತ್ನಿಸಿದರೂ ಸಹ ತಂಡಕ್ಕೆ ಗೆಲುವು ತಂದುಕೊಡಬಲ್ಲ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದರು.
ಈ ಆಟಗಾರರನ್ನು ಹೊರತುಪಡಿಸಿ ತಂಡದ ಉಳಿದ ಯಾವುದೇ ಸ್ಫೋಟಕ ಆಟಗಾರ ಕೂಡ ಯಶಸ್ವಿಯಾಗಲಿಲ್ಲ. ಈ ಮೂಲಕ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 23 ರನ್‌ಗಳ ಸೋಲನ್ನು ಅನುಭವಿಸಿತು. ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಲ್ಲಿನ ತನ್ನ ಮೊದಲ ಗೆಲುವು ಸಾಧಿಸಿದ ನಂತರ ಅಂಕಪಟ್ಟಿ, ಆರೆಂಜ್ ಕ್ಯಾಪ್ ಮತ್ತು ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ಅವುಗಳ ಕುರಿತಾದ ವಿವರ ಈ ಕೆಳಕಂಡಂತಿದೆ.
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು
ಸೋಲಿನ ನಂತರ ಅಂಕಪಟ್ಟಿಯಲ್ಲಿ ಕುಸಿದ ರಾಯಲ್ ಚಾಲೆಂಜರ್ಸ್
ಈ ಪಂದ್ಯಕ್ಕೂ ಮುನ್ನ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಸೋಲಿನ ಮೂಲಕ ಇದೀಗ ಐದನೇ ಸ್ಥಾನಕ್ಕೆ ಕುಸಿದಿದೆ. ಸದ್ಯ 5 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ 6 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೆ, ಪಂದ್ಯ ಆರಂಭಕ್ಕೂ ಮುನ್ನ ಅಂತಿಮ ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಗೆಲುವಿನೊಂದಿಗೆ ಒಂಬತ್ತನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಇನ್ನು ಅಂಕಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ ದ್ವಿತೀಯ, ಲಕ್ನೋ ಸೂಪರ್ ಜೈಂಟ್ಸ್ ತೃತೀಯ ಮತ್ತು ಗುಜರಾತ್ ಟೈಟನ್ಸ್ ನಾಲ್ಕನೇ ಸ್ಥಾನದಲ್ಲಿವೆ.
ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಚೆನ್ನೈ ಆಟಗಾರರ ಅಬ್ಬರ
ಇನ್ನು ಈ ಪಂದ್ಯ ಮುಕ್ತಾಯವಾದ ನಂತರ ಆರೆಂಜ್ ಕ್ಯಾಪ್ ಟಾಪ್ 3 ಪಟ್ಟಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರಾದ ರಾಬಿನ್ ಉತ್ತಪ್ಪ ಮತ್ತು ಶಿವಮ್ ದುಬೆ ಲಗ್ಗೆ ಇಟ್ಟಿದ್ದಾರೆ. ಈ ಪಂದ್ಯದಲ್ಲಿ ಅಬ್ಬರಿಸಿದ ರಾಬಿನ್ ಉತ್ತಪ್ಪ 5 ಪಂದ್ಯಗಳ ಪೈಕಿ 194 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ತೃತೀಯ ಸ್ಥಾನಕ್ಕೇರಿದ್ದಾರೆ ಹಾಗೂ 5 ಪಂದ್ಯಗಳಲ್ಲಿ ಒಟ್ಟು 207 ರನ್ ಚಚ್ಚಿರುವ ಶಿವಮ್ ದುಬೆ ದ್ವಿತೀಯ ಸ್ಥಾನಕ್ಕೆ ಜಿಗಿದಿದ್ದು, 4 ಪಂದ್ಯಗಳನ್ನಾಡಿ 218 ರನ್ ಬಾರಿಸಿರುವ ರಾಜಸ್ತಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಪರ್ಪಲ್ ಕ್ಯಾಪ್ ಪಟ್ಟಿ ಹೀಗಿದೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ ಮುಕ್ತಾಯವಾದ ನಂತರ ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಯುಜುವೇಂದ್ರ ಚಹಾಲ್ ಅಗ್ರಸ್ಥಾನದಲ್ಲಿದ್ದರೆ, ಉಮೇಶ್ ಯಾದವ್ ದ್ವಿತೀಯ, ಕುಲ್ದೀಪ್ ಯಾದವ್ ತೃತೀಯ, ವನಿಂದು ಹಸರಂಗ ನಾಲ್ಕನೇ ಸ್ಥಾನ ಮತ್ತು ಟಿ ನಟರಾಜನ್ ಐದನೇ ಸ್ಥಾನದಲ್ಲಿದ್ದಾರೆ.
ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸಲ್ಲಿಸಿದ ಮನವಿ ಪತ್ರ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








