ಮುಂದಿನ 2 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ವಿಪರೀತ ಮಳೆ, ರೆಡ್ ಅಲರ್ಟ್​

ಬೆಂಗಳೂರು

    ಕರ್ನಾಟಕದಾದ್ಯಂತ ಮುಂದಿನ ಎರಡು ದಿನಗಳ ಕಾಲ ವಿಪರೀತ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

   ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

  ಕ್ಯಾಸಲ್​​ರಾಕ್, ಆಗುಂಬೆ, ಗೇರುಸೊಪ್ಪ, ಶೃಂಗೇರಿ, ಜಯಪುರ, ಮಂಕಿ, ಕೊಪ್ಪ, ಯಲ್ಲಾಪುರ, ಹೊನ್ನಾವರ, ಕಮ್ಮರಡಿ,ಕಳಸ, ಬಾಳೆಹೊನ್ನೂರು, ಅಂಕೋಲಾ, ಮೂಡುಬಿದಿರೆ, ಕಾರವಾರ, ಲೋಂಡಾದಲ್ಲಿ ಅತಿ ಹೆಚ್ಚು ಮಳೆಯಾಗಿದೆ. 

   ಸುಳ್ಯ, ಧರ್ಮಸ್ಥಳ, ಕೋಟಾ, ಭಾಗಮಂಡಲ, ಉಡುಪಿ, ಕುಂದಾಪುರ, ಕಿತ್ತೂರು, ಸೈದಾಪುರ, ಸೋಮವಾರಪೇಟೆ, ಉಡುಪಿ, ಕುಂದಾಪುರ, ಮಂಗಳೂರು, ಗುರುಮಿಟ್ಕಲ್, ಹಳಿಯಾಳ, ಮುಂಡಗೋಡು, ಮಾಣಿ, ಮಂಗಳೂರು, ಪೊನ್ನಂಪೇಟೆ, ನಾಪೋಕ್ಲು, ಪುತ್ತೂರು, ಬಂಟವಾಳ, ಮಂಠಾಳ, ಹಳಿಯಾಳ, ರಾಯಚೂರು,ಉಪ್ಪಿನಂಗಡಿ, ಶಕ್ತಿನಗರ, ಮುಲ್ಕಿ, ಯಡ್ರಾಮಿ, ಚಿತ್ತಾಪುರದಲ್ಲಿ ಮಳೆಯಾಗಿದೆ.

   ಇಂಡಿ, ಹಾವೇರಿ, ಧಾರವಾಡ, ಶೋರಾಪುರ, ತರೀಕೆರೆ, ಚನ್ನಗಿರಿ, ಕೋಲಾರ, ಗಬ್ಬೂರು, ಮುದಗಲ್, ಕಕ್ಕೇರಿ, ಝಲ್ಕಿ, ಕಮಲಾಪುರ, ಲಕ್ಷ್ಮೇಶ್ವರ, ಲಿಂಗಸುಗೂರು, ಹುಬ್ಬಳ್ಳಿ, ತಾಳಿಕೋಟೆ, ಗೋಕಾಕ್, ಕಲಬುರಗಿ, ಬಸವನ ಬಾಗೇವಾಡಿ, ನೆಲೋಗಿ, ಗದಗ, ಹೊನ್ನಾಳಿ, ಚಿಕ್ಕಬಳ್ಳಾಪುರ, ಎಂಎಂ ಹಿಲ್ಸ್​, ದಾವಣಗೆರೆ, ಗೌರಿಬಿದನೂರಿನಲ್ಲಿ ಮಳೆಯಾಗಿದೆ.

  ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಂಗಳವಾರ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  ಹೊನ್ನಾವರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​​ಪೋರ್ಟ್​​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  ಬೆಳಗಾವಿ ಏರ್​​ಪೋರ್ಟ್​​ನಲ್ಲಿ 23.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಕಲಬುರಗಿಯಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 23.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 23.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link