ಬೆಂಗಳೂರು:
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ಇದೆ. ಜುಲೈ 25ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಮುಂದುವರಿದಿದ್ದು, ಮಳೆ ಅಬ್ಬರಿಸಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.
ಇನ್ನು ಜುಲೈ 26ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.
ಅದೇ ರೀತಿ ಜುಲೈ 27ರಂದು ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.ಜುಲೈ 28ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ವರುಣ ಅಬ್ಬರಿಸಲಿದ್ದಾನೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರಲಿದ್ದು, ಮಧ್ಯಮ ಮಳೆಯಾಗಲಿದೆ.
