ಜನಾರ್ಧನ ರೆಡ್ಡಿ ಕುಟೀರ ಅಗ್ನಿಗೆ ಆಹುತಿ

ಕೊಪ್ಪಳ:

     ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ಸೇರಿದ ಆನೆಗೊಂದಿ ತಾಲೂಕಿನ ಪಂಪಾ ಸರೋವರ ಸಮೀಪದಲ್ಲಿರುವ ಕುಟೀರಕ್ಕೆ ಅಗ್ನಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ ಕುಟೀರ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟಾವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

    ಕುಟೀರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಸದ್ಯ ಕುಟೀರದಲ್ಲಿ ಯಾರೂ ಇರಲಿಲ್ಲ.

   ಆದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.ಪಂಪಾ ಸರೋವರ ಜೀರ್ಣೋದ್ಧಾರ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀರಾಮುಲು ಈ ಕುಟೀರ ಬಳಕೆ ಮಾಡುತ್ತಿದ್ದರು. ಬಳಿಕ ಹನುಮಮಾಲೆ ಧರಿಸಿದ ಬಳಿಕ ಶಾಸಕ ಜನಾರ್ಧನ ರೆಡ್ಡಿ ಈ ಕುಟೀರದಲ್ಲಿ ವಾಸಿಸುತ್ತಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

    ಆದರೆ, ಇದೊಂದು ಕಿಡಿಗೇಡಿಗಳ ಕೃತ್ಯ ಎಂದು ಜನಾರ್ಧನ ರೆಡ್ಡಿ ಬೆಂಬಲಿಗರು ಆರೋಪಿಸಿದ್ದಾರೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap