ಕುತೂಹಲಕ್ಕೆ ಕಾರಣ ವಾಯ್ತು ಷಾ-ರೆಡ್ಡಿ ಭೇಟಿ

ಬೆಂಗಳೂರು:

    ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಈ ನಡುವಲ್ಲೇ ರಾಜಕೀಯ ವಲಯದಲ್ಲಿ ದೊಡ್ಡ ತಿರುವು ಎಂಬಂತೆ ಗಂಗಾವತಿ ಕ್ಷೇತ್ರದ ಶಾಸಕ, ಕೆಆರ್​ಪಿಪಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಗುರುವಾರ ಭೇಟಿ ಮಾಡಿದ್ದು, ಇಬ್ಬರ ಭೇಟಿ ಸಾಕಷ್ಟು ಕುತೂಹಲಗಳನ್ನು ಕೆರಳಿಸಿದೆ.

   ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜನಾರ್ಧನ ರೆಡ್ಡಿಯವರು, ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ ಎಂದು ಬರೆದುಕೊಂಡಿದ್ದಾರೆ. ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯಿಂದ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದ ಟಿಕೆಟ್​ ಬಯಸಿದ್ದರು. ಆದರೆ, ಬಿಜೆಪಿ ಹೈಕಮಾಂಡ್​ ಜರ್ನಾದನ ರೆಡ್ಡಿ ಆಸೆಗೆ ಮಣೆ ಹಾಕದ ಕಾರಣ ಅವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿದ್ದರು.

    ಕೆಲ ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಕಾಂಗ್ರೆಸ್‌ ಬೆಂಬಲಸಿದ್ದರು. ಆದರೆ, ಇದೀಗ ಏಕಾಏಕಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Recent Articles

spot_img

Related Stories

Share via
Copy link
Powered by Social Snap