ನವದೆಹೆಲಿ:
ಜನವರಿ 1, 2022ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಕೋವಿನ್ ಆಯಪ್ ನಲ್ಲಿ ನೋಂದಣಿ ಆರಂಭಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ.
ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ
