ಸಾರ್ವತ್ರಿಕ ವರ್ಗಾವಣೆ : ಜೂ 30ರವರೆಗೆ ವಿಸ್ತರಣೆ

ಬೆಂಗಳೂರು: 

    ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.ಈ ಮುಂಚೆ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರ ವರೆಗೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಜೂನ್ ಅಂತ್ಯದವರೆಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

    ವರ್ಗಾವಣೆ ಅವಧಿಯನ್ನು ವಿಸ್ತರಿಸುವ ಅವಶ್ಯಕತೆಯನ್ನು ಮನಗಂಡು ಸರ್ಕಾರವು ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ಜೂನ್ 30ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಈ ಹಿಂದೆ ಹೊರಡಿಸಿದ್ದ ಆದೇಶದಲ್ಲಿ ಹೇಳಲಾಗಿದ್ದು, ಅದರಂತೆ ನೌಕರರ ವರ್ಗಾವಣೆ ಮಾಡಬಹುದಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap