ಬೆಂಗಳೂರು:
ರಾಜ್ಯ ಸರ್ಕಾರದಿಂದ ಮೂಲಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು-ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸುವುದು, ಟೆಂಡರ್ ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಮಾದರಿ ನೀತಿ ಸಂಹಿತೆಯಿಂದ ಸಾಮಾನ್ಯ ವಿನಾಯಿತಿ ನೀಡಿ ಆದೇಶಿಸಿದೆ.
ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಅವರು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಅದರಲ್ಲಿ ಭಾರತ ಚುನಾವಣಾ ಆಯೋಗದ ಷರತ್ತುಗಳಿಗೆ ಒಳಪಟ್ಟು ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಮೂಲಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸೋದಕ್ಕೆ, ಟೆಂಡರ್ ಗಳನ್ನು ಅಂತಿಮಗೊಳಿಸೋದಕ್ಕೆ ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಸಕ್ಷಮ ಪ್ರಾಧಿಕಾರಗಳು ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.