ಚಿಕ್ಕಮಗಳೂರು:
ಕರ್ತವ್ಯಲೋಪ ಆರೋಪ ಮೇರೆಗೆ ಚಿಕ್ಕಮಗಳೂರು ನಗರಠಾಣೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ರೇಣುಕಾಪ್ರಸಾದ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.ಮೂಲತಃ ಚನ್ನಪಟ್ಟಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಓಓಡಿಯಲ್ಲಿ ಇನ್ಸ್‌ಪೆಕ್ಟರ್ ಆಗಿ ರೇಣುಕಾಪ್ರಸಾದ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದು, ದನಗಳ್ಳರು ಪೊಲೀಸರಿಗೆ ಮಚ್ಚು ತೋರಿಸಿದ್ದು ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆತ ಪ್ರಕರಣ, ವಕೀಲರು ಪೊಲೀಸರ ನಡುವಿನ ಸಂಘರ್ಷ ಸೇರಿ ಹಲವು ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಅಮಾನತುಗೊಳಿಸಿದ್ದಾರೆ.ಸದ್ಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆಗಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಚಿನಕುಮಾರ್ ಅವರನ್ನು ಪ್ರಭಾರಿಯಾಗಿ ನಿಯೋಜಿಸಲಾಗಿದೆ.