ಕುರುಬ ಸಮುದಾಯದ ಎಸ್ ಟಿಗೆ ಸೇರ್ಪಡೆ: ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು..

ಬೆಂಗಳೂರು: 

     ಕೇಂದ್ರ ಸರ್ಕಾರಕ್ಕೆ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ(ST) ಸೇರಿಸುವಂತೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

    ಮಂಗಳವಾರ ನಡೆದ ಸಚಿವ ಸಂಪು ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ STಗೆ ಸೇರಿಸುವಂತೆ ಶಿಫಾರಸು ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ.

     ಈ ಹಿಂದೆ 2020-21ರಲ್ಲಿ ಸಮುದಾದ ಮುಖಂಡರು, ಸ್ವಾಮೀಜಿಗಳು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಬೃಹತ್ ಸಂಖ್ಯೆಯಲ್ಲಿ ಪಾದಯಾತ್ರೆ ನಡೆಸಿದ್ದರು. ಈ ಸಂಬಂಧ ವರದಿ ತಯಾರಿಸುವಂತೆ ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆಗೆ ಅಂದಿನ ಸರ್ಕಾರ ಸೂಚಿಸಿತ್ತು.

    ಕರ್ನಾಟಕ ರಾಜ್ಯ ಬುಡಕಟ್ಟು ಸಂಸ್ಥೆ ವರದಿ ನೀಡಿದ್ದು, ಈ ವರದಿಯಲ್ಲಿನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

Recent Articles

spot_img

Related Stories

Share via
Copy link
Powered by Social Snap