ಬೆಂಗಳೂರು:
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿಯಾಗಿ 2018-19ರ ಬಜೆಟ್ ಸಂದರ್ಭದಲ್ಲಿ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿಗಾಗಿ ಎರಡು ಕೋಟಿ ರೂ ಮೀಸಲಿಟ್ಟಿದ್ದ ಹಣವು ಪತ್ರಿಕಾ ವಿತರಕ ನಿಧಿಗೆ ಸೇರ್ಪಡೆಯಾಗಿಲ್ಲ ಎಂಬುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು
ಇದೇ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೂಡ ಭಾಗಿಯಾಗಿ ವಿತರಕರ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿಗಳು ಗಮನ ಸೆಳೆದರು