RCB ವಿರುದ್ಧ ಸೋಲು : ಪಿಚ್​ ಬದಲಿಸಲು KKR ಪಟ್ಟು

ನವದೆಹಲಿ :

     ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು  ಭಾರೀ ಮುಖಭಂಗಕ್ಕೊಳಗಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಹೀನಾಯ ಸೋಲಿನ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಪಿಚ್ ಬಗ್ಗೆ ಅಪಸ್ವರ ಎತ್ತಿದ್ದಾರೆ.

    ಆರ್​ಸಿಬಿ ವಿರುದ್ಧದ ಪಂದ್ಯದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ, ‘ಸ್ಪಿನ್ ಬೌಲರ್‌ಗಳಿಗೆ ಸಹಾಯಕವಾಗುವಂತಹ ಪಿಚ್ ನಮಗೆ ಬೇಕು. ಆದರೆ ಈ ಪಿಚ್​ ಕಳೆದ ಒಂದೂವರೆ ದಿನಗಳಿಂದ ಮುಚ್ಚಿಡಲಾಗಿತ್ತು ಎಂದಿದ್ದರು.

   ಅಲ್ಲದೆ ಕೆಕೆಆರ್ ತಂಡದಲ್ಲಿ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿಯಂತಹ ಗುಣಮಟ್ಟದ ಸ್ಪಿನ್ನರ್‌ಗಳಿದ್ದಾರೆ. ಅವರು ಯಾವುದೇ ಪಿಚ್‌ನಲ್ಲಿ ಬೌಲಿಂಗ್ ಮಾಡಬಲ್ಲರು. ಇದಾಗ್ಯೂ ನಮಗೆ ತವರು ಮೈದಾನವು ಸಹಾಯಕವಾಗಬೇಕೆಂದು ರಹಾನೆ ಆಗ್ರಹಿಸಿದ್ದರು.

Recent Articles

spot_img

Related Stories

Share via
Copy link