ಬೆಂಗಳೂರು
ಸುಡಾನ್ ಸೇನಾ ಸಂಘರ್ಷ ತೀವ್ರ ಸ್ವರೂಪ ಪಡೆದಿದೆ. ಅಲ್ಲಿನ ಅಂತರ್ಯುದ್ಧಲ್ಲಿ ಕರ್ನಾಟಕದ ಬುಡಕಟ್ಟು ಜನರು ಸಿಲುಕಿಕೊಂಡಿದ್ದು ಅವರನ್ನು ಕೂಡಲೇ ಸುರಕ್ಷಿತವಾಗಿ ಕರೆತರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು
ಸುಡಾನ್ ಸೇನಾ ಸಂಘರ್ಷ ತೀವ್ರ ಸ್ವರೂಪ ಪಡೆದಿದೆ. ಅಲ್ಲಿನ ಅಂತರ್ಯುದ್ಧಲ್ಲಿ ಕರ್ನಾಟಕದ ಬುಡಕಟ್ಟು ಜನರು ಸಿಲುಕಿಕೊಂಡಿದ್ದು ಅವರನ್ನು ಕೂಡಲೇ ಸುರಕ್ಷಿತವಾಗಿ ಕರೆತರುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಸುಡಾನ್ನ ಅಂತರ್ಯುದ್ಧದಲ್ಲಿ ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಎಂದು ವರದಿ ಆಗಿದೆ. ಸಂಘರ್ಷ ಸಮಯದಲ್ಲಿ ಕರ್ನಾಟಕದ ಈ ಬುಡಕಟ್ಟು ನಿವಾಸಿಗಳು ಅಲ್ಲಿ ಆಹಾರವಿಲ್ಲದೇ ತತ್ತರಿಸಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದ್ದಾರೆ.
ಕೂಡಲೇ ಕೇಂದ್ರ ಬಿಜೆಪಿ ಸರ್ಕಾರ, ಪ್ರಧಾನಿ ಕಾರ್ಯಾಲಯ ಹಾಗೂ ಪ್ರಧಾನಿ ನರೇಂದ್ರ ಮೋದಿಯಾವರು ಮಧ್ಯೆ ಪ್ರವೇಶಿಸಬೇಕು. ಸುಡಾನ್ನಲ್ಲಿ ಪರದಾಡುತ್ತಿರುವ ಕನ್ನಡಿಗರನ್ನು ರಕ್ಷಣೆ ಮಾಡಬೇಕು. ಈ ಕುರಿತು ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ಮಾಡಿ ಹಕ್ಕಿ ಪಿಕ್ಕಿಗಳ ಜನಾಂಗದವರು ಯೋಗಕ್ಷೇಮ ಖಚಿತಪಡಿಸಿಕೊಳ್ಳಬೇಕು. ಅದಕ್ಕಾಗಿ ಅಂತಾರಾಷ್ಟ್ರೀಯ ಏಜೆನ್ಸಿಗಳಿಗೆ ಸೂಚಿಸಬೇಕು ಎಂದು ಅವರು ಟ್ವೀಟ್ನಲ್ಲಿ ಆಗ್ರಹಿಸಿದ್ದಾರೆ.