ಹಗರಣ ಮುಚ್ಚಿ ಹಾಕಲು ಮೀಸಲಾತಿ ವಿಚಾರ ತರುತ್ತಿದ್ದಾರೆ : ಬಿಜೆಪಿ

ಬೆಂಗಳೂರು:

   ಹಗರಣಗಳು ಮತ್ತು ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯರು ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

   ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುತ್ತೇವೆಂದು ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ