ರೇವಣ್ಣಗೆ ಸಿಕ್ಕು ದೊಡ್ಡ ರಿಲೀಫ್ …!

ಬೆಂಗಳೂರು

   ಮೈಸೂರು ಜಿಲ್ಲೆ ಕೆ.ಆರ್.‌ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್​ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಹೈಕೋರ್ಟ್​ ಇಂದು (ಆಗಸ್ಟ್ 28) ಎಸ್​ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಎಚ್​ಡಿ ರೇವಣ್ಣಗೆ ಮತ್ತಷ್ಟು ಬಿಗ್ ರಿಲೀಫ್ ಸಿಕ್ಕಂತಾಗಿದೆ.

   ಸಂತ್ರಸ್ತೆ ಮಹಿಳೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರೇವಣ್ಣ ಅವರಿಗೆ ಮೇ 13ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿತ್ತು. ಬಳಿಕ ಎಸ್​​ಐಟಿ ವಿಶೇಷ ಕೋರ್ಟ್​ನ ಜಾಮೀನು ಆದೇಶ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದು, ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದು ಮಾಡುವಂತೆ ಮನವಿ ಮಾಡಿತ್ತು. ಆದ್ರೆ, ಕೋರ್ಟ್​ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ.

Recent Articles

spot_img

Related Stories

Share via
Copy link