ಬೆಂಗಳೂರು:
ಇದೀಗ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿರುವ ಆರೋಪ ಹಿನ್ನೆಲೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಕೋರ್ಟ್‌ಗೆ ಹಾಜರುಪಡಿಸಿ ಮೇ 8ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ.
ಇನ್ನು ಇಂದು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಸಹ ಮಾಡಿಸಲಾಗಿತ್ತು. ಈ ವೇಳೆ ಎಚ್.ಡಿ. ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಅಷ್ಟೇ ಅಲ್ಲದೆ, ಹೊಟ್ಟೆ ಉರಿ ಕೂಡ ಹೆಚ್ಚಾಗಿರುವ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ಎಚ್.ಡಿ. ರೇವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ








