ಬಾರ್ಡರ್-ಗವಾಸ್ಕರ್ ಸರಣಿ : ರಿಕಿ ಪಾಂಟಿಂಗ್ ಷಾಕಿಂಗ್ ಭವಿಷ್ಯ

ನವದೆಹಲಿ :

    ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಆರಂಭಕ್ಕೆ ದಿನಗಳು ಮಾತ್ರ ಉಳಿದಿವೆ. ನವೆಂಬರ್‌ 22 ರಿಂದ ಶುರುವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಪ್ರಶ್ನೆಗೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಉತ್ತರಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರಿಕಿ ಪಾಂಟಿಂಗ್, ಇದು ಸ್ಪರ್ಧಾತ್ಮಕ ಸರಣಿಯಾಗಲಿದೆ. ಕಳೆದ ಎರಡು ಸರಣಿಗಳಲ್ಲಿ ಇಲ್ಲಿ ಏನಾಯಿತು ಎಂಬುದರ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ತವರಿನಲ್ಲಿ ಪುಟಿದೇಳಲು ಇದು ಸುವರ್ಣಾವಕಾಶವಾಗಿರುತ್ತದೆ.

    ಏಕೆಂದರೆ ಈ ಬಾರಿ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಕೇವಲ ನಾಲ್ಕು ಟೆಸ್ಟ್‌ ಪಂದ್ಯಗಳಿದ್ದವು. ಐದು ಟೆಸ್ಟ್‌ಗಳನ್ನು ಆಡಲು ಪ್ರತಿಯೊಬ್ಬರೂ ನಿಜವಾಗಿಯೂ ಉತ್ಸುಕರಾಗಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ರಿಕಿ ಪಾಂಟಿಂಗ್ ಹೇಳಿದ್ದಾರೆ.ಹಾಗೆಯೇ ಐದು ಪಂದ್ಯಗಳಿರುವುದರಿಂದ ಕೆಲ ಮ್ಯಾಚ್​ಗಳು ಡ್ರಾ ಆಗಬಹುದು. ಇದಾಗ್ಯೂ ಈ ಸರಣಿಯನ್ನು ಆಸ್ಟ್ರೇಲಿಯಾ ತಂಡ 3-1 ಅಂತರದಿಂದ ಗೆಲ್ಲಲಿದೆ ಎಂದು ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದಾರೆ.

    ಅಂದರೆ ರಿಕಿ ಪಾಂಟಿಂಗ್ ಪ್ರಕಾರ, ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೇವಲ 1 ಪಂದ್ಯವನ್ನು ಮಾತ್ರ ಗೆಲ್ಲಲಿದೆ. ಅತ್ತ ಆಸೀಸ್ ಪಡೆ 3 ಮ್ಯಾಚ್​ಗಳಲ್ಲಿ ಜಯ ಸಾಧಿಸುವ ಮೂಲಕ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟ್ರೋಫಿ ಎತ್ತಿ ಹಿಡಿಯಲಿದೆ ಎಂದು ಪಾಟಿಂಗ್ ಅಭಿಪ್ರಾಯಪಟ್ಟಿದ್ದಾರೆ. 

    ಅಂದಹಾಗೆ ಆಸ್ಟ್ರೇಲಿಯಾ ತಂಡವು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಕೊನೆಯ ಬಾರಿಗೆ ಗೆದ್ದಿರುವುದು 2014-15 ರಲ್ಲಿ. ಇದಾದ ಬಳಿಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಮೂರು ಬಾರಿ ಸರಣಿ ಜಯಿಸಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಕಳೆದ ಎರಡು ಸರಣಿಗಳನ್ನು ಟೀಮ್ ಇಂಡಿಯಾ 2-1 ಅಂತರದಿಂದ ಗೆದ್ದಿರುವುದು ವಿಶೇಷ.

Recent Articles

spot_img

Related Stories

Share via
Copy link