ನವದೆಹಲಿ:
ರಿಷಭ್ ಪಂತ್ ತಂಡಕ್ಕೆ ಮರಳುವ ದಿನಾಂಕವನ್ನು ದೃಢಪಡಿಸಲಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಬಹುನಿರೀಕ್ಷಿತ ಟೆಸ್ಟ್ ಸರಣಿಗೂ ಮುನ್ನ ಪ್ರವಾಸಿ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧದ ಎರಡು ಅನಧಿಕೃತ ಟೆಸ್ಟ್ ಪಂದ್ಯಗಳಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಭಾರತ ಎ ತಂಡವನ್ನು ಮುನ್ನಡೆಸಲಿದ್ದಾರೆ. ಹಲವಾರು ಟೆಸ್ಟ್ ಆಟಗಾರರನ್ನು ಒಳಗೊಂಡ ಭಾರತ ಎ ತಂಡದ ಉಪನಾಯಕನನ್ನಾಗಿ ಸಾಯಿ ಸುದರ್ಶನ್ ಅವರನ್ನು ನೇಮಿಸಲಾಗಿದೆ.
ಭಾರತ ಎ ತಂಡವು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಾಲ್ಕು ದಿನಗಳ ಎರಡೂ ಪಂದ್ಯಗಳನ್ನು ಆಡಲಿದೆ. ಮೊದಲ ಪಂದ್ಯ ಅಕ್ಟೋಬರ್ 30 ರಂದು ಆರಂಭವಾಗಲಿದ್ದು, ಎರಡನೇ ಪಂದ್ಯ ನವೆಂಬರ್ 6 ರಂದು ಅದೇ ಸ್ಥಳದಲ್ಲಿ ನಡೆಯಲಿದೆ. ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್, ಧ್ರುವ್ ಜುರೆಲ್ ಮತ್ತು ಮೊಹಮ್ಮದ್ ಸಿರಾಜ್ ಆಡಲಿದ್ದಾರೆ.
ಈ ವರ್ಷದ ಜುಲೈನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಸಂದರ್ಭದಲ್ಲಿ ಪಾದದ ಮೂಳೆ ಮುರಿತಕ್ಕೊಳಗಾದ ನಂತರ ಪಂತ್ ಆಟದಿಂದ ಹೊರಗುಳಿದಿದ್ದರು. ಪರಿಣಾಮವಾಗಿ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾದ ವೈಟ್-ಬಾಲ್ ಪ್ರವಾಸವನ್ನು ತಪ್ಪಿಸಿಕೊಂಡರು.
ರಿಷಭ್ ಪಂತ್ (ನಾಯಕ, ಆಯುಷ್ ಮ್ಹಾತ್ರೆ, ಎನ್ ಜಗದೀಸನ್, ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಅಂಶುಲ್ ಕಾಂಬೋಜ್, ಯಶ್ ಠಾಕೂರ್, ಆಯುಷ್ ಬಡೋನಿ, ಸರನ್ಶ್ ಜೈನ್.
ರಿಷಭ್ ಪಂತ್ (ನಾಯಕ), ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿ.ಕೀ.), ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಖಲೀಲ್ ಅಹ್ಮದ್, ಗುರ್ನೂರ್ ಬ್ರಾರ್, ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
