ಬೆಂಗಳೂರು:
ತೆರಿಗೆ ಪಾವತಿ ಬಾಕಿ ಹಿನ್ನಲೆಯಲ್ಲಿ ಬೆಂಗಳೂರಿನ ರಾಕ್ ಲೈನ್ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಒಡೆತನದ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಇಂದು ಪಾಲಿಕೆ ಕಂದಾಯ ಅಧಿಕಾರಿಗಳು ಈಗ ಮಾಲ್ ಅನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಮೂಲಗಳ ಪ್ರಕಾರ ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.
ತೆರಿಗೆ ಪಾವತಿ ಬಾಕಿ ಉಳಿಸಿಕೊಂಡ ಆರೋಪದ ಮೇಲೆ ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.