ಶ್ರೀಲಂಕಾ : ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಕೊಲಂಬೊ :
 
   ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್ ಅವರ ಸರ್ವಶ್ರೇಷ್ಠ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

   ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 47 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 58 ರನ್ ಬಾರಿಸಿದ್ದರು. ಈ 58 ರನ್​ಗಳೊಂದಿಗೆ ಹಿಟ್​ಮ್ಯಾನ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆರಂಭಿಕನಾಗಿ 15 ಸಾವಿರ ರನ್ ಕಲೆಹಾಕಿದ 10ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು.
   ಅದರಲ್ಲೂ ಆರಂಭಿಕನಾಗಿ ಅತೀ ವೇಗವಾಗಿ 15 ಸಾವಿರ ರನ್ ಪೂರೈಸಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ರೋಹಿತ್ ಶರ್ಮಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಆಸೀಸ್ ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ ಅವರ ಹೆಸರಿನಲ್ಲಿತ್ತು.
   ಆಸ್ಟ್ರೇಲಿಯಾ ಪರ ಏಕದಿನ, ಟಿ20 ಮತ್ತು ಟೆಸ್ಟ್ ಕ್ರಿಕೆಟ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದಿರುವ ಡೇವಿಡ್ ವಾರ್ನರ್ 15 ಸಾವಿರ ರನ್ ಪೂರೈಸಲು 361 ಇನಿಂಗ್ಸ್​ಗಳನ್ನು ತೆಗೆದುಕೊಂಡಿದ್ದರು. ಈ ಮೂಲಕ ಅತೀ ವೇಗವಾಗಿ 15000 ರನ್ ಕಲೆಹಾಕಿದ ವಿಶ್ವದ 2ನೇ ಓಪನರ್ ಎನಿಸಿಕೊಂಡಿದ್ದರು.
   ಇದೀಗ ಡೇವಿಡ್ ವಾರ್ನರ್ ಅವರನ್ನು ಹಿಂದಿಕ್ಕಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ಪರ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್​ನಲ್ಲಿ ಇನಿಂಗ್ಸ್ ಆರಂಭಿಸಿರುವ ರೋಹಿತ್ ಶರ್ಮಾ ಕೇವಲ 352 ಇನಿಂಗ್ಸ್​ಗಳ ಮೂಲಕ 15 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ವಾರ್ನರ್ ದಾಖಲೆ ಮುರಿದು ಅತೀ ವೇಗವಾಗಿ 15000 ರನ್ ಕಲೆಹಾಕಿದ ವಿಶ್ವದ 2ನೇ ಆರಂಭಿಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap