ಬೆಂಗಳೂರು:
ರಾಜರಾಜೇಶ್ವರಿನಗರದಲ್ಲಿ ಸೋಮವಾರ ಮತ್ತು ಮಂಗಳವಾರ ಚಿರತೆ ಕಾಣಿಸಿಕೊಂಡಿದೆ ಎಂದು ನಿವಾಸಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದರು. ನಂತರ ಚಿರತೆಗಾಗಿ ಶೋಧ ಕಾರ್ಯ ಆರಂಭಿಸಿದರು.
ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ ಬದಲು ಈ ಪ್ರದೇಶದಲ್ಲಿ ನಾಯಿ ಪತ್ತೆಯಾಗಿದ್ದು ನಾವು ಈಗ ನಾಯಿಯ ಮಾಲೀಕರನ್ನು ಪತ್ತೆ ಮಾಡಬೇಕೇ? ಎಂದು ಅರಣ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತ ಪಡಿಸಿದ್ದಾರೆ.
ಫೆಬ್ರವರಿ 11 ರಂದು ತಮ್ಮ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಆರ್‌ಆರ್ ನಗರದ ನಿವಾಸಿಗಳು ಅರಣ್ಯ ಅಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರು. ಫೆಬ್ರವರಿ 19 ರಂದು ಮತ್ತೆ ಚಿರತೆ ಕಾಣಿಸಿಕೊಂಡಿದೆ ಎಂದು ಕರೆ ಮಾಡಲಾಗಿತ್ತು.
ಆದರೆ ದೃಶ್ಯಾವಳಿಗಳು ಸ್ಪಷ್ಟವಾಗಿಲ್ಲ. ಚಿರತೆ ಎಂದು ಭಾವಿಸಿದ ನಿವಾಸಿಗಳು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಸಿಬ್ಬಂದಿಗಳು ಜಾಗದಲ್ಲಿ ಕೂಲಂಕುಷವಾಗಿ ಶೋಧಿಸಿದ ಬಳಿಕ ನಾಯಿ ಇರುವುದು ಪತ್ತೆಯಾಯಿತು.