ಹೊಸ ದಾಖಲೆ ಬರೆದ “RRR”…!

ನವದೆಹಲಿ: 

     ವಿಶ್ವ ಪ್ರಸಿದ್ಧ ಆಸ್ಕರ್‌ ಅವಾರ್ಡ್‌ ಸಮಾರಂಭದಲ್ಲಿ ದಕ್ಷಿಣ ಭಾರತ ಚಿತ್ರರಂಗಕ್ಕೆ ಹೆಮ್ಮೆಯ ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ದೊರಕಿದೆ.

     ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಭಾರತದ ಮೂಲ ಸಂಸ್ಕೃತಿಯನ್ನು ಹಾಡಿನಲ್ಲಿ ಹೇಳುವ ಮೂಲಕ ಹಾಡನ್ನು ವಿಶಿಷ್ಠವಾಗಿಸಿದ ಚಿತ್ರತಂಡ ಈ ಪ್ರಶಸ್ತಿಯನ್ನು ಬಾಚಿಕೊಂಡಿದೆ.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap